ಬೆಂಗಳೂರಿನಲ್ಲಿ ಬೆಂಕಿಗೆ ಆಹುತಿಯಾದ ಖಾಸಗಿ ಬಸ್
ಬೆಂಗಳೂರು, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ಚಂದ್ರಾಲೇಔಟ್ ಪ್ರದೇಶದಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಡಿಪೋ ಸಮೀಪ ಖಾಸಗಿ ಬಸ್‌ವೊಂದು ಏಕಾಏಕಿ ಹೊತ್ತಿ ಉರಿದ ಘಟನೆ ಬೆಳಿಗ್ಗೆ ಸಂಭವಿಸಿದೆ. ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವು
Bus fire


ಬೆಂಗಳೂರು, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ಚಂದ್ರಾಲೇಔಟ್ ಪ್ರದೇಶದಲ್ಲಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಡಿಪೋ ಸಮೀಪ ಖಾಸಗಿ ಬಸ್‌ವೊಂದು ಏಕಾಏಕಿ ಹೊತ್ತಿ ಉರಿದ ಘಟನೆ ಬೆಳಿಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಅಥವಾ ಸಿಬ್ಬಂದಿ ಬಸ್‌ನೊಳಗೆ ಇರಲಿಲ್ಲವೆಂದು ತಿ::ಳಿದುಬಂದಿದೆ. ಬೆಂಕಿಯ ಜ್ವಾಲೆಗಳು ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಇತರ ವಾಹನಗಳಿಗೂ ಹಬ್ಬಿ, ಅವುಗಳಿಗೆ ಸಹ ಹಾನಿಯಾಗಿದೆ.

ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿಯನ್ನು ನಿಯಂತ್ರಣಕ್ಕೆ ತಂದರು. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಶಾರ್ಟ್ ಸರ್ಕ್ಯೂಟ್, ಡೀಸೆಲ್ ಟ್ಯಾಂಕ್‌ನಲ್ಲಿ ಉಂಟಾದ ಸೋರಿಕೆ ಅಥವಾ ಕಿಡಿಗೇಡಿಗಳ ಕೃತ್ಯವೇ ಎಂಬ ಎಲ್ಲಾ ಆಯಾಮಗಳಿಂದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande