ವೇಶ್ಯಾವಾಟಿಕೆ ಪ್ರಕರಣ ; ಅಪರಾಧಿಗೆ ದಂಡ ಸಹಿತ 3 ವರ್ಷಗಳ ಜೈಲು ಶಿಕ್ಷೆ ಪ್ರಕಟ
ಕೊಪ್ಪಳ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅನೈತಿಕ ಹಾಗೂ ಕಾನೂನು ಬಾಹಿರ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಹಾಗೂ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ಸುಮಾ ಹಿರೇಮಠ ಎಂಬ ಅಪರಾಧಿಗೆ ಕೊಪ್ಪಳ ಸಿಜೆಎಂ ನ್ಯಾಯಾಲಯವು ರೂ.7 ಸ
ವೇಶ್ಯಾವಾಟಿಕೆ ಪ್ರಕರಣ ; ಅಪರಾಧಿಗೆ ದಂಡ ಸಹಿತ 3 ವರ್ಷಗಳ ಜೈಲು ಶಿಕ್ಷೆ ಪ್ರಕಟ


ಕೊಪ್ಪಳ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಅನೈತಿಕ ಹಾಗೂ ಕಾನೂನು ಬಾಹಿರ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ಹಾಗೂ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ಸುಮಾ ಹಿರೇಮಠ ಎಂಬ ಅಪರಾಧಿಗೆ ಕೊಪ್ಪಳ ಸಿಜೆಎಂ ನ್ಯಾಯಾಲಯವು ರೂ.7 ಸಾವಿರಗಳ ದಂಡ ಸಹಿತ 3 ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿ ಫೆ.13 ರಂದು ತೀರ್ಪು ಪ್ರಕಟಿಸಿದೆ.

ಕೊಪ್ಪಳದ ನಗರದ ಸುಮಾ ಹಿರೇಮಠ ಎಂಬ ಮಹಿಳೆಯು ಹೊಸಪೇಟೆ ರಸ್ತೆಯ ದಿವಟರ ನಗರದ ಶ್ರೀ ಮಾತಾ ಹೋಟೆಲ್ ಹಿಂದೆ ಗವಿಕೃಪಾ ಎಂಬ ನಿವಾಸದಲ್ಲಿ ಬೇರೆ ಬೇರೆ ಸ್ಥಳಗಳಿಂದ ಮಹಿಳೆಯರನ್ನು ಕರೆಯಿಸಿ, ದುಡ್ಡಿನ ಆಸೆ ತೋರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ 2018ರ ನವೆಂಬರ್ 14 ರಂದು ಠಾಣಾ ಗುನ್ನೆ ನಂ.237/2018 ರಲ್ಲಿ ಕಲಂ:3[1], 5[1][ಎ],[ಬಿ], 8 ಐಟಿಪಿ ಕಾಯ್ದೆ-1956 ರಡಿ ಪ್ರಕರಣ ದಾಖಲಿಸಲಾಗಿತ್ತು.

ಕೊಪ್ಪಳ ನಗರ ಪೊಲೀಸ್ ಠಾಣೆಯ ಅಂದಿನ ತನಿಖಾಧಿಕಾರಿಯಾಗಿದ್ದ ಪಿಎಸ್‍ಐ ಫಕೀರಮ್ಮ ಅವರು ತನಿಖೆ ನಡೆಸಿ ಆರೋಪಿಯ ಮೇಲೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸಿಸಿ ಸಂ.64/2019 ರಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೊಪ್ಪಳ ಸಿಜೆಂ ನ್ಯಾಯಾಲಯದ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಲ್ಕಾರಿ ರಾಮಪ್ಪ ಒಡೆಯರ್ ಅವರು ಆರೋಪಿತಳ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತಳಿಗೆ 3 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.7,000/- ಗಳ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ವಸಂತ ಅವರು ವಾದ ಮಂಡಿಸಿದ್ದರು. ಕೊಪ್ಪಳ ನಗರ ಠಾಣೆ ಸಿಬ್ಬಂದಿ ಲತೀಫ್ ಪಾಶಾ ಸಿ.ಎಚ್.ಸಿ-15, ಮಂಜುನಾಥ ಕಡಗತ್ತಿ ಪಿಸಿ-605 ಇವರು ನ್ಯಾಯಾಲಯಕ್ಕೆ ಸರಿಯಾದ ಸಮಯಕ್ಕೆ ಸಾಕ್ಷಿದಾರರನ್ನು ಹಾಜರುಪಡಿಸಿ ಸಹಕರಿಸಿದ್ದಾರೆ ಎಂದು ಕೊಪ್ಪಳ ಸಿಜೆಎಂ ನ್ಯಾಯಾಲಯದ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಕಾರ್ಯಾಲಯದ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande