ಮಾಹಿತಿ ಹಕ್ಕು ಕಾಯ್ದೆ ; ಕಲಬುರಗಿ ಪೀಠಕ್ಕೆ ದ್ವಿತೀಯ ಮೇಲ್ಮನವಿ ಅರ್ಜಿ ಸಲ್ಲಿಸಲು ಅವಕಾಶ
ಕೊಪ್ಪಳ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲ್ಬುರ್ಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ಕಲ್ಬುರ್ಗಿ ಪೀಠದಲ್ಲಿ ಸ್ವೀಕರಿಸಲಾಗುವು
ಮಾಹಿತಿ ಹಕ್ಕು ಕಾಯ್ದೆ ; ಕಲಬುರಗಿ ಪೀಠಕ್ಕೆ ದ್ವಿತೀಯ ಮೇಲ್ಮನವಿ ಅರ್ಜಿ ಸಲ್ಲಿಸಲು ಅವಕಾಶ


ಕೊಪ್ಪಳ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲ್ಬುರ್ಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ಕಲ್ಬುರ್ಗಿ ಪೀಠದಲ್ಲಿ ಸ್ವೀಕರಿಸಲಾಗುವುದು.

ಈ ಮುಂಚೆ ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಲ್ಲಿಕೆಯಾಗುತ್ತಿದ್ದ ದ್ವಿತೀಯ ಮೇಲ್ಮನವಿಗಳು ಬೆಂಗಳೂರಿನ ಕರ್ನಾಟಕ ಮಾಹಿತಿ ಆಯೋಗದಲ್ಲಿ ಸಲ್ಲಿಸಬೇಕಿತ್ತು.

ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗಲು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರು ತಮ್ಮ ಮಾಹಿತಿ ಹಕ್ಕು ಕಾಯ್ದೆ, 2005ರ ಕಲಂ 19(3) ದ್ವಿತೀಯ ಮೇಲ್ಮನವಿಯನ್ನು ಕರ್ನಾಟಕ ಮಾಹಿತಿ ಆಯೋಗ, ಕಲ್ಬುರ್ಗಿ ಪೀಠ ಮಹಲ್-ಎ-ಶಾಹಿ ಅತಿಥಿ ಗೃಹ, ಹಳೆಯ ಪಿ.ಡಬ್ಲ್ಯೂ.ಡಿ. ಐ.ಬಿ ಅವರಣ, ರೈಲ್ವೆ ಸ್ಟೇಷನ್ ಎದುರುಗಡೆ ಕಲಬುರಗಿ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪೀಠದ ಶಾಖಾಧಿಕಾರಿ (ಪ್ರಭಾರಿ) ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande