ಎಐ ಶೃಂಗಸಭೆ ; ಭಾರತಕ್ಕೆ ಆಗಮಿಸಿದ ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್
ನವದೆಹಲಿ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಸ್ಪೇನ್ ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಭಾರತಕ್ಕೆ ಆಗಮಿಸಿದರು. ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಜಯಂತ ಚೌ
SPAIN-PRESIDENT


ನವದೆಹಲಿ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸಲು ಸ್ಪೇನ್ ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಭಾರತಕ್ಕೆ ಆಗಮಿಸಿದರು.

ಅವರನ್ನು ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಜಯಂತ ಚೌದರಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಧ್ಯಕ್ಷ ಸ್ಯಾಂಚೆಜ್ ಭಾರತಕ್ಕೆ ಆಗಮಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಧ್ಯಕ್ಷ ಸ್ಯಾಂಚೆಜ್ ಅವರ ಈ ಭೇಟಿ ಭಾರತ ಮತ್ತು ಸ್ಪೇನ್ ನಡುವಿನ ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಚೈತನ್ಯ ನೀಡಲಿದ್ದು, ವಿಶೇಷವಾಗಿ ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ಘೋಷಿಸಲಾದ ಸಹಯೋಗದ ವರ್ಷದ ಚಟುವಟಿಕೆಗಳಿಗೆ ವೇಗ ನೀಡಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆ ತಂತ್ರಜ್ಞಾನ, ನವೋದ್ಯಮ ಮತ್ತು ಜಾಗತಿಕ ಸಹಭಾಗಿತ್ವದ ದೃಷ್ಟಿಯಿಂದ ಪ್ರಮುಖ ವೇದಿಕೆಯಾಗಿ ಹೊರಹೊಮ್ಮಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande