ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿದ ಸಚಿವ ಮಂಕಾಳ ವೈದ್ಯ
ಭಟ್ಕಳ, 18 ಫೆಬ್ರವರಿ (ಹಿ.ಸ.) : ಆ್ಯಂಕರ್ : ಭಟ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಹಿಳಾ ಸಬಲೀಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಮಂಕಾಳ ವೈದ್ಯ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತ
sewing machines


ಭಟ್ಕಳ, 18 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಭಟ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಹಿಳಾ ಸಬಲೀಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ಮಂಕಾಳ ವೈದ್ಯ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು. ಮಹಿಳೆಯರು ಸ್ವಾವಲಂಬಿಯಾಗಿ ಸ್ವಯಂ ಉದ್ಯೋಗ ಆರಂಭಿಸಲು ಹಾಗೂ ಆರ್ಥಿಕವಾಗಿ ಸದೃಢರಾಗಲು ಈ ಯೋಜನೆ ನೆರವಾಗಲಿದೆ ಎಂದು ಅವರು ತಿಳಿಸಿದರು.

ಹಿಂದುಳಿದ ವರ್ಗಗಳ ಮಹಿಳೆಯರ ಆರ್ಥಿಕ ಪ್ರಗತಿಗೆ ಸರ್ಕಾರ ಬದ್ಧವಾಗಿದ್ದು, ವಿವಿಧ ಸ್ವಯಂ ಉದ್ಯೋಗ ಯೋಜನೆಗಳ ಮೂಲಕ ನೆರವು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande