ಜಿಲ್ಲಾಮಟ್ಟದ ಉದ್ಯೋಗ ಮೇಳ: ಸಮನ್ವಯದಿಂದ ಕಾರ್ಯ ನಿರ್ವಹಿಸಲು ಡಿಸಿ ಸೂಚನೆ
ಧಾರವಾಡ, 18 ಫೆಬ್ರವರಿ (ಹಿ.ಸ.): ಆ್ಯಂಕರ್: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಧಾರವಾಡದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್
Dc


ಧಾರವಾಡ, 18 ಫೆಬ್ರವರಿ (ಹಿ.ಸ.):

ಆ್ಯಂಕರ್:

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಧಾರವಾಡದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಪದವಿ ಹಾಗೂ ಐಟಿಐ ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸುವಂತೆ ಮಾಹಿತಿ ನೀಡಲು ಸೂಚಿಸಿದರು. ಮೇಳದ ಯಶಸ್ಸಿಗಾಗಿ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಅಭ್ಯರ್ಥಿಗಳಿಗೆ ಅಗತ್ಯ ಮೂಲಸೌಕರ್ಯ, ಸಹಾಯ ಕೇಂದ್ರಗಳು ಹಾಗೂ ಹೆಚ್ಚಿನ ನೋಂದಣಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande