
ಬೆಂಗಳೂರು, 19 ಫೆಬ್ರವರಿ (ಹಿ.ಸ.):
ಆ್ಯಂಕರ್:ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಮುಖ ನಾಯಕರು ಪಾಲ್ಗೊಂಡು, ಮುಂಬರುವ ಜಿಬಿಎ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಹಿನ್ನೆಲೆಯಲ್ಲಿ ಸಂಘಟನೆ ಬಲಪಡಿಸುವುದು ಮತ್ತು ಕಾರ್ಯತಂತ್ರ ರೂಪಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿದರು.
ಸಭೆಯಲ್ಲಿ ರಾಜ್ಯ ಸರಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ ಎಂದು ಟೀಕಿಸಿ, ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ರೂಪಿಸುವ ಸಂಕಲ್ಪ ಕೈಗೊಳ್ಳಲಾಯಿತು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟಗಳನ್ನು ಸಂಘಟಿಸುವ ಮೂಲಕ ಜನರ ಮನಸ್ಸಿಗೆ ತಲುಪುವ ಕಾರ್ಯಯೋಜನೆ ರೂಪಿಸಲಾಯಿತು ತಿರ್ಮಾನಿಸಲಾಯಿತು.
ಸಭೆಯಲ್ಲಿ ಸಂಘಟನೆ ಬಲಪಡಿಸುವುದು, ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಚಟುವಟಿಕೆ ವಿಸ್ತರಿಸುವುದು ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ಪ್ರಾಮುಖ್ಯತೆ ನೀಡಿ ಹೋರಾಟಗಳನ್ನು ರೂಪಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa