
ನವದೆಹಲಿ, 19 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಭಾರತದ ಸ್ವಾತಂತ್ರ್ಯ ಹೋರಾಟಗಾರ , ಮಹಾತ್ಮ ಗಾಂಧಿಯವರ ರಾಜಕೀಯ ಮಾರ್ಗದರ್ಶಕರೂ ಹಾಗೂ ಮಾಜಿ ಕಾಂಗ್ರೆಸ್ ಅಧ್ಯಕ್ಷರೂ ಆದ ಗೋಪಾಲ ಕೃಷ್ಣ ಗೋಖಲೆ ಅವರ ಪುಣ್ಯತಿಥಿಯಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಗೌರವ ನಮನ ಸಲ್ಲಿಸಿದ್ದಾರೆ.
ಗೋಖಲೆ ಅವರ ವಸಾಹತುಶಾಹಿ ಆಳ್ವಿಕೆಯ ವಿರುದ್ಧದ ಹೋರಾಟಕ್ಕೆ ಸಲ್ಲಿಸಿದ ಅಪಾರ ಕೊಡುಗೆಗಳು ನ್ಯಾಯ, ಸ್ವಾತಂತ್ರ್ಯ ಮತ್ತು ರಾಷ್ಟ್ರ ನಿರ್ಮಾಣದ ಅನ್ವೇಷಣೆಯಲ್ಲಿ ಅನೇಕ ಪೀಳಿಗೆಗಳಿಗೆ ಸ್ಫೂರ್ತಿಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ದೇಶದ ರಾಜಕೀಯ ಚಿಂತನೆಗೆ ದಿಕ್ಕುನಿರ್ದೇಶನ ನೀಡಿದ ಗೋಖಲೆ ಅವರ ಮೌಲ್ಯಾಧಾರಿತ ರಾಜಕಾರಣ ಇಂದಿಗೂ ಪ್ರಸ್ತುತವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಪ್ರತಿಪಾದಿಸಿದ ಗೋಖಲೆ ಅವರ ಆದರ್ಶಗಳನ್ನು ಅನುಸರಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಖರ್ಗೆ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa