ಅಲ್ಪಸಂಖ್ಯಾತ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತ ವಸತಿ ಶಾಲೆಗಳ ೬ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೋಲಾರ ೧೯ ಫೆಬ್ರವರಿ (ಹಿ.ಸ) :

ಆ್ಯಂಕರ್ : ೨೦೨೬–೨೭ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಉಚಿತ ವಸತಿ ಶಿಕ್ಷಣ ನೀಡುವ ಉದ್ದೇಶದಿಂದ ೬ನೇ ತರಗತಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪ್ರಧಾನಮಂತ್ರಿ ಹೊಸ ೧೫ ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿ (ಆಐಅ) ಸದಸ್ಯರಾದ ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಈ ಪ್ರವೇಶ ಪ್ರಕ್ರಿಯೆಯಲ್ಲಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೋರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಮುಸ್ಲಿಂ ವಸತಿ ಶಾಲೆಗಳು ಸೇರಿವೆ. ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದ್ದು, ಫೆಬ್ರವರಿ ೨೮, ೨೦೨೬ ಅರ್ಜಿ ಸಲ್ಲಿಕೆಯ ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಯ ಸ್ಟಾಟ್ಸ್ ಐಡಿ ಸಂಖ್ಯೆ, ಜಾತಿ ಹಾಗೂ ಆದಾಯ ಪ್ರಮಾಣಪತ್ರದ ಖಆ ಸಂಖ್ಯೆ, ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಫೋಟೋ ಮತ್ತು ಅನ್ವಯವಾಗುವ ವಿಶೇಷ ವರ್ಗದ ಮೀಸಲಾತಿ ಪ್ರಮಾಣಪತ್ರಗಳು ಕಡ್ಡಾಯವಾಗಿವೆ. ಪ್ರವೇಶಕ್ಕೆ ಸಂಬ0ಧಿಸಿದ ಸಂಪೂರ್ಣ ಅಧಿಸೂಚನೆ, ಅರ್ಹತಾ ಮಾನದಂಡಗಳು ಹಾಗೂ ವಸತಿ ಶಾಲೆಗಳ ಪಟ್ಟಿಯ ವಿವರಗಳು ಕರ್ನಾಟಕ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ.

ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ಅಲ್ಲದೆ, ಅರ್ಜಿ ಪ್ರಕ್ರಿಯೆಗೆ ಸಂಬAಧಿಸಿದ ಸಹಾಯವನ್ನು ಆಯಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿಗಳ ಕಚೇರಿಗಳು, ಸಂಬAಧಿತ ಅಲ್ಪಸಂಖ್ಯಾತ ವಸತಿ ಶಾಲೆಗಳು ಹಾಗೂ ಸಮೀಪದ ಅಲ್ಪಸಂಖ್ಯಾತ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಪಡೆಯಬಹುದಾಗಿದೆ ಎಂದು ಶಬ್ಬೀರ್ ಅಹ್ಮದ್ ತಿಳಿಸಿದ್ದಾರೆ.

ಸರ್ಕಾರವು ಶಿಕ್ಷಣಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡುತ್ತಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದೆAಬ ಉದ್ದೇಶದಿಂದ ವಿವಿಧ ಯೋಜನೆಗಳಡಿ ವಸತಿ ಶಾಲೆಗಳನ್ನು ಸ್ಥಾಪಿಸಿದೆ. ಈ ವಸತಿ ಶಾಲೆಗಳ ಮೂಲಕ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ, ಆಹಾರ ಮತ್ತು ಶಿಸ್ತುಬದ್ಧ ಕಲಿಕಾ ವಾತಾವರಣ ಒದಗಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಯುಗಕ್ಕೆ ಸಜ್ಜಾಗುವಂತೆ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಅವಕಾಶ ಸಿಗುತ್ತದೆ.

ಇಂದಿನ ಮಕ್ಕಳು ನಾಳಿನ ಪ್ರಜೆಗಳಾಗಿರುವುದರಿಂದ, ಅವರು ಉತ್ತಮ ನಾಗರಿಕರಾಗಬೇಕು ಎಂಬ ಆಶಯ ಸರ್ಕಾರದದ್ದಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಸರ್ಕಾರ ಒದಗಿಸುತ್ತಿರುವ ಉಚಿತ ವಸತಿ ಶಿಕ್ಷಣ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಮಕ್ಕಳನ್ನು ವಸತಿ ಶಾಲೆಗಳಲ್ಲಿ ದಾಖಲಿಸಬೇಕು. ಉತ್ತಮ ಶಿಕ್ಷಣದ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಈ ಅವಕಾಶವನ್ನು ಕಳೆದುಕೊಳ್ಳಬಾರದು ಎಂದು ಶಬ್ಬೀರ್ ಅಹ್ಮದ್ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande