
ಬೆಂಗಳೂರು, 19 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪ್ರೆಸ್ ಕ್ಲಬ್ ಆಫ್ ಬೆಂಗಳೂರು ವತಿಯಿಂದ ಪ್ರದಾನ ಮಾಡುವ ಪ್ರತಿಷ್ಠಿತ ‘ವರ್ಷದ ವ್ಯಕ್ತಿ’ ವಿಶೇಷ ಪ್ರಶಸ್ತಿಯನ್ನು ನಗರದಲ್ಲಿರುವ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಇಂದು ನಡೆದ ಸಮಾರಂಭದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪ್ರಧಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ
ಶಾಸಕ ರಿಜ್ವಾನ ಅರ್ಷದ್ , ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ, ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ ಹಾಗೂ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸೇರಿದಂತೆ ಅನೇಕ ಗಣ್ಯರು ಮತ್ತು ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, “ಈ ಗೌರವವು ನನ್ನ ವೈಯಕ್ತಿಕ ಸಾಧನೆಗಷ್ಟೇ ಸೀಮಿತವಾಗಿಲ್ಲ. ನನ್ನ ಮೇಲೆ ವಿಶ್ವಾಸವಿಟ್ಟು ಬೆಂಬಲ ನೀಡಿದ ಜನತೆಗೆ ಸಲ್ಲಿಸಿದ ಸಮ್ಮಾನವಾಗಿದೆ. ಈ ಮಾನ್ಯತೆ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸಂಕಲ್ಪವನ್ನು ಪುನರುಚ್ಚರಿಸುತ್ತೇನೆ,” ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa