
ಹಾಸನ, 19 ಫೆಬ್ರವರಿ (ಹಿ.ಸ.):
ಆ್ಯಂಕರ್:
ಹಾಸನ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಫೆ.21 ರಂದು ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿಯವರ ಅಧ್ಯಕ್ಷತೆಯಲ್ಲಿ ಜನಸ್ಪಂದನಾ /ಸಾರ್ವಜನಿಕ ಕುಂದುಕೊರತೆ ಸಭೆ ಆಯೋಜಿಸಲಾಗಿರುತ್ತದೆ.
ಸಾರ್ವಜನಿಕ ಕುಂದು ಕೊರತೆ ಅಹವಾಲನ್ನು ದಾಖಲಿಸಲು ಸರ್ಕಾರವು ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾAಶದಲ್ಲಿ (Iಟಿಣegಡಿಚಿಣeಜ Pubಟiಛಿ ಉಡಿievಚಿಟಿಛಿe ಖeಜಡಿessಚಿಟ Sಥಿsಣem) ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಸದರಿ ದಿನದಂದು ಸಾರ್ವಜನಿಕರು ಖುದ್ದು ಹಾಜರಾಗಿ ಮನವಿಗಳನ್ನು ನೀಡಲು ತೆರೆಯಲಾದ ಕೌಂಟರ್‌ಗಳಲ್ಲಿ ಅರ್ಜಿಗಳನ್ನು ದಾಖಲಿಸಿಕೊಂಡು ಟೋಕನ್ ನಂಬರ್‌ಗಳನ್ನು ಸ್ವೀಕರಿಸಿ ತಮ್ಮ ಅಹವಾಲನ್ನು ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa