
ಧಾರವಾಡ, 19 ಫೆಬ್ರವರಿ (ಹಿ.ಸ.):
ಆ್ಯಂಕರ್:
ಶಿವಾಜಿ ಮಹಾರಾಜ ಅವರು ಕೇವಲ ಶೂರ ಯೋಧರಷ್ಟೇ ಅಲ್ಲ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯ ಆಧಾರದಲ್ಲಿ ಉತ್ತಮ ಆಡಳಿತ ನೀಡಿದ ಮಹಾನ್ ರಾಜರು ಎಂದು ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಹೇಳಿದರು.
ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮರಾಠ ವಿದ್ಯಾ ಪ್ರಸಾರಕ ಮಂಡಳದಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಪೀಳಿಗೆ ಶಿವಾಜಿ ಮಹಾರಾಜರ ಜೀವನದಿಂದ ಧೈರ್ಯ, ಆತ್ಮವಿಶ್ವಾಸ, ದೇಶಭಕ್ತಿ ಹಾಗೂ ಶಿಸ್ತು ಕಲಿಯಬೇಕು. ಇತಿಹಾಸದ ಅರಿವು ಮಕ್ಕಳಲ್ಲಿ ಸ್ವಾಭಿಮಾನ ಮತ್ತು ದೇಶಪ್ರೇಮ ಬೆಳೆಸಲು ನೆರವಾಗುತ್ತದೆ ಎಂದರು. ಅವರ ಆಡಳಿತದಲ್ಲಿ ಜಾತಿ-ಧರ್ಮ ಬೇಧವಿಲ್ಲದೆ ಎಲ್ಲರಿಗೂ ಅವಕಾಶ ಕಲ್ಪಿಸಲಾಗುತ್ತಿತ್ತು. ವಿವಿಧ ಸಮುದಾಯಗಳ ಜನರಿಗೆ ಸೇನೆ ಹಾಗೂ ಆಡಳಿತದಲ್ಲಿ ಸ್ಥಾನ ನೀಡುವ ಮೂಲಕ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ದಾರಿ ಹಾಕಿದರು ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa