ಫೆ. 26 ರಂದು ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ
ಕೊಪ್ಪಳ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಜಿಲ್ಲೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆ ಫಲಾನುಭವಿಗಳಿಗೆ ಯುವನಿಧ
ಫೆ. 26 ರಂದು ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ


ಕೊಪ್ಪಳ, 19 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಜಿಲ್ಲೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಫೆಬ್ರುವರಿ 26 ರಂದು (ಗುರುವಾರ) ಕೊಪ್ಪಳ ನಗರದ ಅಶೋಕ ವೃತ್ತ ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿರುವ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಕೊಪ್ಪಳ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗವಿಶಂಕರ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande