ಅಂಕೋಲಾ ಬಳಿ ಸರಣಿ ಅಪಘಾತ ; ಹಲವರಿಗೆ ಗಾಯ
ಅಂಕೋಲಾ, 19 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ, ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗ
ಅಂಕೋಲಾ ಬಳಿ ಸರಣಿ ಅಪಘಾತ ; ಹಲವರಿಗೆ ಗಾಯ


ಅಂಕೋಲಾ, 19 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಸುಂಕಸಾಳ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ, ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 24 ಮಂದಿ ಗಾಯಗೊಂಡಿದ್ದಾರೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ, ಬೆಂಗಳೂರಿನಿಂದ ಗೋವಾಕ್ಕೆ ಸಾಗುತ್ತಿದ್ದ ‘ಖಾಸಗಿ’ ಬಸ್‌ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಇದರ ಪರಿಣಾಮವಾಗಿ ಲಾರಿ ಉರುಳಿ ಬಿದ್ದಿದ್ದು, ಲಾರಿ ಚಾಲಕನ ಕಾಲಿಗೆ ಗಂಭೀರ ಗಾಯವಾಗಿದೆ. ಬಳಿಕ ಹಿಂಬದಿಯಿಂದ ಬರುತ್ತಿದ್ದ ‘ಮತ್ತೊಂದು ಖಾಸಗಿ ’ ಬಸ್, ಅಪಘಾತಕ್ಕಿಡಾದ ಬಸ್‌ಗೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಸಂಭವಿಸಿದೆ.

ಹಂಪಿಯಿಂದ ಗೋವಾಕ್ಕೆ ಪ್ರಯಾಣಿಸುತ್ತಿದ್ದ 12 ವಿದೇಶಿ ಪ್ರವಾಸಿಗರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಅಂಕೋಲ ಹಾಗೂ ಕಾರವಾರದ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಪರಿಣಾಮವಾಗಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ನಂತರ ಪೊಲೀಸರು ಮತ್ತು ಸಾರ್ವಜನಿಕರ ಸಹಕಾರದಿಂದ ವಾಹನ ಸಂಚಾರವನ್ನು ಪುನಃ ಆರಂಭಿಸಲಾಯಿತು.

ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande