
ಹಾಸನ, 19 ಫೆಬ್ರವರಿ (ಹಿ.ಸ.);
ಆ್ಯಂಕರ್:
ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಫೆ.20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆಗೆ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ ದೇವೇಗೌಡ ಘನ ಉಪಸ್ಥಿತರಿರಲಿದ್ದು, ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಭೈರೇಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಕರ್ನಾಟಕ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ.ಎಂ ಶಿವಲಿಂಗೇಗೌಡ ಉಪಸ್ಥಿತರಿರಲಿದ್ದು, ಶಾಸಕ ಸ್ವರೂಪ್ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದರಾದ ಶ್ರೇಯಸ್ ಎಂ. ಪಟೇಲ್, ಶಾಸಕರುಗಳಾದ ಹೆಚ್.ಡಿ ರೇವಣ್ಣ, ಸಿ.ಎನ್ ಬಾಲಕೃಷ್ಣ, ಎ.ಮಂಜು, ಹೆಚ್.ಕೆ ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಶಾಸಕರುಗಳಾದ ಸೂರಜ್ ರೇವಣ್ಣ, ಮಧು ಜಿ, ಮಾದೇಗೌಡ, ಕೆ,ವಿವೇಕಾನಂದ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಪಟೇಲ್ ಶಿವಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಖ್ಯಶಿಕ್ಷಕರಾದ ಬಿ.ಡಿ. ಶಂಕರೇಗೌಡ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa