
ಹಾಸನ, 19 ಫೆಬ್ರವರಿ (ಹಿ.ಸ.):
ಆ್ಯಂಕರ್:
ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು. ವೆಬ್ ಸೈಟ್ hಣಣಠಿs://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿಯು ಯಾವ ಹಂತದಲ್ಲಿದೆ ಎಂಬುವುದನ್ನು ಪರಿಶೀಲಿಸಿಕೊಂಡು ಹಾಗೂ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು 25ನೇ ದಿನಾಂಕದೊಳಗೆ ಸ್ವಯಂ-ಘೋಷಣೆಯನ್ನು ಮಾಡಿಕೊಳ್ಳಬೇಕು ಮತ್ತು ಯುವನಿಧಿ ಪ್ಲಸ್ ತರಬೇತಿಗೆ ನೋಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08172-296374ಗೆ ಸಂಪರ್ಕಿಸುವಂತೆ ಹಾಸನ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa