ಗ್ರಾಮೀಣ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸಿ: ಸಿಇಓ ಭುವನೇಶ ಪಾಟೀಲ
ಧಾರವಾಡ, 19 ಫೆಬ್ರವರಿ (ಹಿ.ಸ.): ಆ್ಯಂಕರ್: ಬೇಸಿಗೆ ಕಾಲದ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಎಲ್ಲಾ ಕುಡಿಯುವ ನೀರಿನ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ
Meeting


ಧಾರವಾಡ, 19 ಫೆಬ್ರವರಿ (ಹಿ.ಸ.):

ಆ್ಯಂಕರ್:

ಬೇಸಿಗೆ ಕಾಲದ ಹಿನ್ನೆಲೆ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ, ಎಲ್ಲಾ ಕುಡಿಯುವ ನೀರಿನ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಸೂಚಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ದತ್ತಾಂಶ ಆಧರಿಸಿ ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು. ಜಿಲ್ಲೆಯಲ್ಲಿ ಜಾರಿಯಲ್ಲಿರುವ ಜಲ್ ಜೀವನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬೇಸಿಗೆ ಅವಧಿಯಲ್ಲಿ ಕಲುಷಿತ ನೀರು ಪೂರೈಕೆ ಆಗದಂತೆ ಎಚ್ಚರಿಕೆ ವಹಿಸಿ, ನೀರು ಸಂಗ್ರಹ ಮತ್ತು ಪೂರೈಕೆ ಸ್ಥಳಗಳಲ್ಲಿ ಮಾದರಿ ಪರೀಕ್ಷೆ ನಡೆಸಿ ಶುದ್ಧ ನೀರು ಪೂರೈಕೆ ಖಚಿತಪಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಲಜೀವನ ಮಿಷನ್ ಸೇರಿದಂತೆ ವಿವಿಧ ಕುಡಿಯುವ ನೀರಿನ ಕಾಮಗಾರಿಗಳ ಪ್ರಗತಿ ಪರಿಶೀಲಿಸಲಾಯಿತು. ಸಂಬಂಧಿತ ಅಧಿಕಾರಿಗಳು ಹಾಗೂ ಅಭಿಯಂತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande