ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಶೌರ್ಯ ಇಂದಿಗೂ ಸ್ಫೂರ್ತಿ: ಎಂ.ಶಿವಾಜಿರಾವ್
ಬಳ್ಳಾರಿ, 20 ಫೆಬ್ರವರಿ (ಹಿ.ಸ.): ಆ್ಯಂಕರ್ : ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಬಾಲ್ಯದ ಶೌರ್ಯ ಮತ್ತು ಯುದ್ಧ ಕೌಶಲ್ಯಗಳು ನಮಗೆಲ್ಲರಿಗೂ ಇಂದಿಗೂ ಸ್ಫೂರ್ತಿ ಎಂದು ಪೊಲೀಸ್ ಇಲಾಖೆಯ ನಿವೃತ್ತ ಶಾಖಾಧೀಕ್ಷಕ ಎಂ.ಶಿವಾಜಿರಾವ್ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕ
Courage of Chhatrapati Shivaji Maharaj: M. Shivaji Rao


Courage of Chhatrapati Shivaji Maharaj: M. Shivaji Rao


ಬಳ್ಳಾರಿ, 20 ಫೆಬ್ರವರಿ (ಹಿ.ಸ.):

ಆ್ಯಂಕರ್ : ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ, ಬಾಲ್ಯದ ಶೌರ್ಯ ಮತ್ತು ಯುದ್ಧ ಕೌಶಲ್ಯಗಳು ನಮಗೆಲ್ಲರಿಗೂ ಇಂದಿಗೂ ಸ್ಫೂರ್ತಿ ಎಂದು ಪೊಲೀಸ್ ಇಲಾಖೆಯ ನಿವೃತ್ತ ಶಾಖಾಧೀಕ್ಷಕ ಎಂ.ಶಿವಾಜಿರಾವ್ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಡಾ.ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು.

ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಬ್ಬ ರಾಜನಾಗಿರದೇ, ಭಾರತದ ರಾಷ್ಟ್ರಪುರುಷರಾಗಿ ಹಿಂದೂ ಸ್ವರಾಜ್ಯ ಸ್ಥಾಪಿಸಿದರು. ದಾಸ್ಯ ಮತ್ತು ಗುಲಾಮತನದಿಂದ ದೇಶವನ್ನು ಮುಕ್ತಗೊಳಿಸಿ, ಪರಕೀಯರ ದಾಳಿಯಿಂದ ರಕ್ಷಿಸಿದ ಮಹಾನ್ ಚೇತನರು ಎಂದು ತಿಳಿಸಿದರು.

ಭವ್ಯ ಮೆರವಣಿಗೆ:

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದಲ್ಲಿ ವಿಜೃಂಭಣೆಯಿಂದ ಭವ್ಯ ಮೆರವಣಿಗೆ ನಡೆಯಿತು. ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಿಂದ ಆರಂಭವಾಗಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ, ಹಳೆಯ ಜಿಲ್ಲಾಧಿಕಾರಿಗಳ ಮುಂಭಾಗದಿಂದ, ಹೆಚ್.ಆರ್.ಗವಿಯಪ್ಪ ವೃತ್ತದ ಮಾರ್ಗವಾಗಿ ಸಾಗಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರ ತಲುಪಿತು.

ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಂಧ್ಯಾ ಕೋಲಾಚಲಂ ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಮೂಡಿಬಂತು.

ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮರಾಠ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 'ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಕಪ್-2026' ಕ್ರಿಕೆಟ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಚಾಂಪಿಯನ್: ಮರಾಠ ಯೋಧ ತಂಡ, ಬಳ್ಳಾರಿ.

ರನ್ನರ್ಸ್-ಅಪ್: ಶಿವಾಜಿ ವಾರಿಯರ್ಸ್ ತಂಡ, ಸಂಡೂರು. ಜೊತೆಗೆ ಮಹಿಳೆಯರಿಗೆ ಮತ್ತು ಮಕ್ಕಳಿಗಾಗಿ ಆಯೋಜಿಸಿದ್ದ ವಿವಿಧ ಕ್ರೀಡಾ ಸ್ಪರ್ಧೆಗಳ ವಿಜೇತರಿಗೂ ಬಹುಮಾನ ನೀಡಿ ಅಭಿನಂದಿಸಲಾಯಿತು.

ಈ ವೇಳೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಸಮಾಜದ ಮುಖಂಡರಾದ ಯಶವಂತರಾವ್ ಜಗತಾಪ್, ಕರ್ನಾಟಕ ಮರಾಠ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಸೇನೆ ರಾಜ್ಯ ಯುವ ಅಧ್ಯಕ್ಷ ವಿನೋದ್ ಎಂ. ಚವ್ಹಾಣ್, ಹುಲಿಗಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ರಾವ್, ನಾಗರಾಜ್ ರಾವ್, ದಿನೇಶ್ ನಲವಡೆ, ಯಲ್ಲಪ್ಪ ಘೋರ್ಪಡೆ, ಮುರಾರಿ ಜಾಧವ, ಆರ್. ಎಲ್. ಜಾಧವ, ನೀಲಕಂಠರಾವ್ ಮೋರೆ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande