
ವಿಜಯಪುರ, 20 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ, ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಫೆ.21ರಂದು ಮಧ್ಯಾಹ್ನ 3:30 ಗಂಟೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.
ಗ್ರಾಮೀಣ ಉಪ ವಿಭಾಗದ ಕಚೇರಿ ವ್ಯಾಪ್ತಿಯ ಗ್ರಾಮಗಳ ಗ್ರಾಹಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ವಿಜಯಪುರ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande