
ವಿಜಯಪುರ, 20 ಫೆಬ್ರವರಿ (ಹಿ.ಸ.) :
ಆ್ಯಂಕರ್ : ವಿಜಯಪುರ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಸಿನೀಯರ್ ರಿಸರ್ಚ್ ಫೆಲೋ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕಾತಿಗೆ ದಿನಾಂಕ : 26-02-2026ರಂದು ಬೆಳಿಗ್ಗೆ 10:30ಗಂಟೆಗೆ ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವವಿದ್ಯಾಲಯ ಧಾರವಾಡ, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಹ ಸಂಶೋಧನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande