
ಗದಗ, 20 ಫೆಬ್ರವರಿ (ಹಿ.ಸ.)
ಆ್ಯಂಕರ್:
ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 1 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿಂದು ರೇಣುಕಾಚಾರ್ಯ ಜಯಂತಿ ಕುರಿತು ಜರುಗಿದ ಪೂರ್ವ ಸಿದ್ದಾತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀ ರೇಣುಕಾಚಾರ್ಯ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅದ್ಯಕ್ಷತೆಯಲ್ಲಿ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿಯಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ , ಹಿರಿಯರಿಗೆ ಸನ್ಮಾನ ನಡೆಸುವ ಕಾರ್ಯಕ್ರಮ ಜರುಗಲಿದೆ ಎಂದರು.
ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕು. ಶ್ರೀ ರೇಣುಕಾಚಾರ್ಯ ಜಯಂತಿ ಕುರಿತು ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಒಟ್ಟಾರೆಯಾಗಿ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಸುವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ , ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಸಮಾಜದ ಹಿರಿಯರು, ಗಣ್ಯರು, ಮುಖಂಡರು, ಮಹಿಳೆಯರು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಕುಮಾರ ಸೋಪಡ್ಲ , ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP