ಅರುಣಾಚಲ ಪ್ರದೇಶ, ಮಿಜೋರಾಂ ಜನತೆಗೆ ರಾಹುಲ್ ಗಾಂಧಿ ಶುಭಾಶಯ
ನವದೆಹಲಿ, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯೋತ್ಸವದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, “ರೋಮಾಂಚಕ ಸಂಸ್ಕೃತಿ, ನಿರಂತರ ಸಂಪ್ರದಾಯಗಳು ಮತ್
greets


ನವದೆಹಲಿ, 20 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯೋತ್ಸವದ ಅಂಗವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನತೆಗೆ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, “ರೋಮಾಂಚಕ ಸಂಸ್ಕೃತಿ, ನಿರಂತರ ಸಂಪ್ರದಾಯಗಳು ಮತ್ತು ಅಪಾರ ನೈಸರ್ಗಿಕ ಸೌಂದರ್ಯದಿಂದ ಸಮೃದ್ಧವಾಗಿರುವ ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ಭಾರತದ ವೈವಿಧ್ಯಮಯ ಪರಂಪರೆಯ ಅವಿಭಾಜ್ಯ ಅಂಗಗಳಾಗಿವೆ” ಎಂದು ತಿಳಿಸಿದ್ದಾರೆ.

ಈ ಎರಡೂ ರಾಜ್ಯಗಳ ಜನತೆ ಶಕ್ತಿ, ಏಕತೆ ಮತ್ತು ಪ್ರಗತಿಪರ ಮನೋಭಾವದಿಂದ ಮುಂದುವರಿಯಲಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಏಳಿಗೆ ಮತ್ತು ಅಭಿವೃದ್ಧಿ ಸಾಧಿಸಲಿ ಎಂದು ರಾಹುಲ್ ಗಾಂಧಿ ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande