ನಾಳೆ ಕೊಪ್ಪಳದಲ್ಲಿ ಮಾಹಿತಿ ಹಕ್ಕು ಕಾರ್ಯಾಗಾರ
ಕೊಪ್ಪಳ , 20 ಫೆಬ್ರವರಿ (ಹಿ.ಸ.): ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದಿಂದ ಫೆ.21 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಮಾಹಿತಿ ಹಕ್ಕು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ. ವೆಂಕಟಸಿಂಗ್ ಹಾಗೂ ಬೆಂಗಳ
ನಾಳೆ ಕೊಪ್ಪಳದಲ್ಲಿ ಮಾಹಿತಿ ಹಕ್ಕು ಕಾರ್ಯಾಗಾರ


ಕೊಪ್ಪಳ , 20 ಫೆಬ್ರವರಿ (ಹಿ.ಸ.):

ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದಿಂದ ಫೆ.21 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಮಾಹಿತಿ ಹಕ್ಕು ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತರಾದ ಬಿ. ವೆಂಕಟಸಿಂಗ್ ಹಾಗೂ ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಹಾಗೂ ಡಾ.ಹರೀಶಕುಮಾರ ಅವರು ಮಾಹಿತಿ ಹಕ್ಕು ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವರು.

ಆದ್ದರಿಂದ ಕಾರ್ಯಾಗಾರಕ್ಕೆ ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಪೆÇಲೀಸ್ ಇಲಾಖೆಯ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರೆ ಎಲ್ಲಾ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande