ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ; ವಿಜಯೇಂದ್ರ ಆಕ್ರೋಶ
ಬೆಂಗಳೂರು, 20 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ
Byv


ಬೆಂಗಳೂರು, 20 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಅವರ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಘಟನೆ ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯವಾಗಿದೆ ಎಂದು ಹೇಳಿದ್ದಾರೆ. “ದುರಾಡಳಿತ ಮತ್ತು ತುಘಲಕ್ ಶೈಲಿಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಂತಾಗಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದಿದ್ದರೆ, ರಾಜ್ಯದಲ್ಲಿ ಜನಸಾಮಾನ್ಯರ ಸುರಕ್ಷತೆ ಎಲ್ಲಿ?” ಎಂದು ಪ್ರಶ್ನಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಿಂದೂಗಳ ಹಬ್ಬ–ಮೆರವಣಿಗೆಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿರುವುದು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ ಎಂದು ಆರೋಪಿಸಿರುವ ವಿಜಯೇಂದ್ರ, ರಾಜ್ಯ ಸರ್ಕಾರದ ಮೌನವೇ ಇಂತಹ ಪುಂಡಾಟಿಕೆಗೆ ಉತ್ತೇಜನ ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಎಚ್ಚೆತ್ತು, ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. “ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಮ್ಮ ಆರಾಧ್ಯ ಪುರುಷರ ಮತ್ತು ನಾಡಿನ ಅಸ್ಮಿತೆಯ ವಿಷಯದಲ್ಲಿ ನಾವು ಸುಮ್ಮನಿರುವುದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande