
ಧಾರವಾಡ, 20 ಫೆಬ್ರವರಿ (ಹಿ.ಸ.):
ಆ್ಯಂಕರ್:ಬೇಸಿಗೆ ಅವಧಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೃಷಿ ಪಂಪ್‌ಸೆಟ್‌ಗಳಿಗೆ ಸಾಧ್ಯವಾದಷ್ಟು ಹಗಲು ಅಥವಾ ಸಂಜೆ ವೇಳೆ ವಿದ್ಯುತ್ ಪೂರೈಸುವಂತೆ ತಿಳಿಸಿದರು. ತಡರಾತ್ರಿ ವಿದ್ಯುತ್ ನೀಡುವುದರಿಂದ ರೈತರಿಗೆ ನೀರಾವರಿ ಕಾರ್ಯದಲ್ಲಿ ತೊಂದರೆ ಉಂಟಾಗುತ್ತದೆ ಎಂದರು.
ಜಿಲ್ಲೆಯಲ್ಲಿ 67 ಕೃಷಿ ಫೀಡರ್‌ಗಳ ಮೂಲಕ ನಿಗದಿತ ಅವಧಿಯಲ್ಲಿ ಒಟ್ಟು 7 ಗಂಟೆ ವಿದ್ಯುತ್ ಪೂರೈಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ ಕಲಘಟಗಿ, ಅಳ್ನಾವರ ಸೇರಿದಂತೆ ಕೆಲ ಭಾಗಗಳಲ್ಲಿ ಸರಿಯಾದ ಪೂರೈಕೆ ಇಲ್ಲವೆಂಬ ದೂರುಗಳು ಬಂದಿರುವುದಾಗಿ ಸಚಿವರು ಹೇಳಿದರು.
ತಬಕದಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರವನ್ನು ಉನ್ನತಿಕರಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು. ನಿಗದಿ, ಅರಳಿಕಟ್ಟಿ ಕ್ರಾಸ್ ಹಾಗೂ ಬಮ್ಮಿಗಟ್ಟಿ ಗ್ರಾಮಗಳಿಗೆ ಹೊಸ ವಿತರಣಾ ಕೇಂದ್ರ ಸ್ಥಾಪನೆ ಕ್ರಮವೂ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಖಾದ್ರಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa