ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ
ಧಾರವಾಡ, 20 ಫೆಬ್ರವರಿ (ಹಿ.ಸ.): ಆ್ಯಂಕರ್:ಸಂತಕವಿ ಸರ್ವಜ್ಞ ಅವರ ತ್ರಿಪದಿಗಳು ಚಿಕ್ಕದಾಗಿದ್ದರೂ ಆಳವಾದ ತತ್ವ, ವ್ಯಂಗ್ಯಭರಿತ ಹಾಸ್ಯ ಹಾಗೂ ಜೀವನ ಪಾಠಗಳನ್ನು ಒಳಗೊಂಡಿವೆ. ಸುಲಭವಾಗಿ ಮನನವಾಗುವ ರೀತಿಯಲ್ಲಿ ರಚಿಸಲ್ಪಟ್ಟಿರುವುದರಿಂದ ಸಾಮಾನ್ಯ ಜನರೂ ಅವುಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ ಎಂ
Jayanti


ಧಾರವಾಡ, 20 ಫೆಬ್ರವರಿ (ಹಿ.ಸ.):

ಆ್ಯಂಕರ್:ಸಂತಕವಿ ಸರ್ವಜ್ಞ ಅವರ ತ್ರಿಪದಿಗಳು ಚಿಕ್ಕದಾಗಿದ್ದರೂ ಆಳವಾದ ತತ್ವ, ವ್ಯಂಗ್ಯಭರಿತ ಹಾಸ್ಯ ಹಾಗೂ ಜೀವನ ಪಾಠಗಳನ್ನು ಒಳಗೊಂಡಿವೆ. ಸುಲಭವಾಗಿ ಮನನವಾಗುವ ರೀತಿಯಲ್ಲಿ ರಚಿಸಲ್ಪಟ್ಟಿರುವುದರಿಂದ ಸಾಮಾನ್ಯ ಜನರೂ ಅವುಗಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.

ಧಾರವಾಡದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವಜ್ಞರ ವಚನಗಳು ಜನರಲ್ಲಿ ಜಾಗೃತಿ ಮೂಡಿಸಿ, ಸತ್ಯ ಮತ್ತು ನೀತಿಯ ಮಾರ್ಗವನ್ನು ತೋರಿಸಿವೆ. ದಾನ, ಧರ್ಮ, ಶ್ರಮ ಹಾಗೂ ಮಾನವೀಯ ಮೌಲ್ಯಗಳನ್ನು ಸರಳ ಭಾಷೆಯಲ್ಲಿ ಬೋಧಿಸಿದವರು ಸರ್ವಜ್ಞರು. ಕಾಯಕ ಮತ್ತು ಅನುಭವದಿಂದಲೇ ನಿಜವಾದ ಜ್ಞಾನ ದೊರೆಯುತ್ತದೆ ಎಂಬ ಸಂದೇಶವನ್ನು ಅವರು ತಮ್ಮ ತ್ರಿಪದಿಗಳ ಮೂಲಕ ನೀಡಿದ್ದಾರೆ ಎಂದು ಹೇಳಿದರು.

ಮಾಜಿ ಸಂಸದ ಪ್ರೊ. ಐ.ಜಿ. ಸನದಿ ಮಾತನಾಡಿ, ಸರ್ವಜ್ಞರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ವಿದ್ಯಾರ್ಥಿಗಳು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆದರ್ಶ ಪದವಿ ಪೂರ್ವ ಕಾಲೇಜಿನ ನಂದೀಶ ಕಾಖಂಡಕಿ ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ಗಣ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande