
ಬಳ್ಳಾರಿ, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ಸಿಗರು ಬರಿಮೈಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಭಾರತದ ಮರ್ಯಾದೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದು, ಭಾರತೀಯ ಸಂಸ್ಕøತಿ - ಸಂಸ್ಕಾರಕ್ಕೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿಯ ಯುವ ಮೋರ್ಚಾ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಗುರ್ರಂ ವೆಂಕಟರಮಣ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಡವಿಸ್ವಾಮಿ, ಯುವ ಮೋರ್ಚಾ ನಗರಾಧ್ಯಕ್ಷ ಕೇಶವ್, ಓಂ ಪ್ರಕಾಶ್ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್