
ನವದೆಹಲಿ, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಇಂದು ಅಸ್ಸಾಂನಲ್ಲಿ ನಡೆಯುವ ಸಿಆರ್‌ಪಿಎಫ್ 87ನೇ ಸ್ಥಾಪನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಗೃಹ ಸಚಿವಾಲಯ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಸಿಆರ್‌ಪಿಎಫ್ ಪಡೆಗಳ ಶೌರ್ಯ, ತ್ಯಾಗ ಮತ್ತು ರಾಷ್ಟ್ರ ಭದ್ರತೆಯಲ್ಲಿ ಅವರ ಪಾತ್ರವನ್ನು ಸ್ಮರಿಸಲಾಗುತ್ತದೆ. ದೇಶದ ಅಂತರ್ರಾಷ್ಟ್ರೀಯ ಗಡಿಗಳ ಭದ್ರತೆ, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ಹಾಗೂ ಆಂತರಿಕ ಶಾಂತಿ ಕಾಪಾಡುವಲ್ಲಿ ಸಿಆರ್‌ಪಿಎಫ್ ಪ್ರಮುಖ ಪಾತ್ರ ವಹಿಸಿದೆ.
ಇದರ ಜೊತೆಗೆ, ಅಮಿತ್ ಶಾ ಅವರು ಅಸ್ಸಾಂ ಪೊಲೀಸ್‌ನ 10ನೇ ಬ್ಯಾಟಾಲಿಯನ್‌ನ ಹೊಸ ಕ್ಯಾಂಪಸ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹೊಸ ಕ್ಯಾಂಪಸ್ ನಿರ್ಮಾಣದಿಂದ ರಾಜ್ಯದಲ್ಲಿ ಪೊಲೀಸ್ ಪಡೆಗಳ ಮೂಲಸೌಕರ್ಯ ಬಲಪಡಿಸುವುದು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಸಾಮರ್ಥ್ಯ ವೃದ್ಧಿಯಾಗಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa