ಚಿತ್ತಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಂಕಲ್ಪ : ಸಚಿವ ಖರ್ಗೆ
ಕಲಬುರಗಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ₹139 ಕೋಟಿ ವೆಚ್ಚದಲ್ಲಿ 9 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ
Kharge


ಕಲಬುರಗಿ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ₹139 ಕೋಟಿ ವೆಚ್ಚದಲ್ಲಿ 9 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಚಿತ್ತಾಪುರ ತಾಲೂಕು ಕೃಷಿ ಉತ್ಪಾದನೆಯಲ್ಲಿ ಗಣನೀಯ ಪ್ರಗತಿ ಸಾಧಿಸಲು ರೈತರಿಗೆ ಸಮರ್ಪಕ ನೀರು, ವಿದ್ಯುತ್ ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಆಗಿದೆ. ಈ ನಿಟ್ಟಿನಲ್ಲಿ ಬೇಸಿಗೆಯಲ್ಲಿ ನೀರಿನ ಕೊರತೆ ಉದ್ಭವಿಸಬಾರದು ಎಂಬ ಸದುದ್ದೇಶದಿಂದ ಕೈಗೆತ್ತಿಕೊಂಡಿರುವ, ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಭರದಿಂದ ಸಾಗಿದೆ. ಚಿತ್ತಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಗ್ಯಾರಂಟಿ ಸರ್ಕಾರದ ಸಂಕಲ್ಪವಾಗಿದೆ ಎಂದು‌ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande