ಎಐ ಶೃಂಗಸಭೆ ವೇಳೆ ಕಾಂಗ್ರೆಸ್ ಪ್ರತಿಭಟನೆ ಖಂಡನೀಯ : ಜಗದೀಶ್ ಶೆಟ್ಟರ್
ಹುಬ್ಬಳ್ಳಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೇಶದ ರಾಜಧಾನಿ ನವದೆಹಲಿಯಲ್ಲಿ ಜಗತ್ತಿನ ಪ್ರಭಾವಿ ನಾಯಕರು ಮತ್ತು ತಂತ್ರಜ್ಞಾನ ದಿಗ್ಗಜರು ಭಾಗವಹಿಸಿರುವ ಎಐ ಶೃಂಗಸಭೆ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್
Shetter


ಹುಬ್ಬಳ್ಳಿ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ದೇಶದ ರಾಜಧಾನಿ ನವದೆಹಲಿಯಲ್ಲಿ ಜಗತ್ತಿನ ಪ್ರಭಾವಿ ನಾಯಕರು ಮತ್ತು ತಂತ್ರಜ್ಞಾನ ದಿಗ್ಗಜರು ಭಾಗವಹಿಸಿರುವ ಎಐ ಶೃಂಗಸಭೆ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿರುವ ಅವರು, ಇದು ಕೇವಲ ರಾಜಕೀಯ ವಿರೋಧವಲ್ಲ; ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆಯನ್ನು ಕುಗ್ಗಿಸುವ ಸಂಚು ಎಂದಿದ್ದಾರೆ. ಇಡೀ ಜಗತ್ತು ಭಾರತದ ತಾಂತ್ರಿಕ ಬೆಳವಣಿಗೆಯನ್ನು ಗಮನಿಸುತ್ತಿರುವ ಈ ಸಂದರ್ಭದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿರುವುದು ವಿದೇಶಿ ಗಣ್ಯರ ಮುಂದೆ ದೇಶದ ಮಾನ ಹರಾಜು ಹಾಕಿದಂತಾಗಿದೆ ಎಂದು ಅವರು ಆರೋಪಿಸಿದರು.

‘ಮೇಕ್ ಇನ್ ಇಂಡಿಯಾ’ ಮತ್ತು ‘ಡಿಜಿಟಲ್ ಇಂಡಿಯಾ’ ಅಭಿಯಾನಗಳ ಮೂಲಕ ಭಾರತ ವಿಶ್ವಗುರುವಾಗುವತ್ತ ಸಾಗುತ್ತಿದೆ. ಇಂತಹ ಶೃಂಗಸಭೆಗಳ ಮೂಲಕ ದೇಶಕ್ಕೆ ಬರುವ ಹೂಡಿಕೆಗಳನ್ನು ತಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಶೆಟ್ಟರ್ ದೂರಿದರು. ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ರಾಷ್ಟ್ರಹಿತದ ವಿಷಯದಲ್ಲಿ ಒಗ್ಗಟ್ಟು ಅಗತ್ಯ ಎಂದು ಅವರು ಹೇಳಿದರು.

ವಿದೇಶಿ ಪ್ರತಿನಿಧಿಗಳು ಭಾಗವಹಿಸಿರುವ ವೇಳೆ ದೇಶೀಯ ವಿಷಯಗಳನ್ನು ಮುಂದಿಟ್ಟುಕೊಂಡು ಗದ್ದಲ ಮಾಡುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ. ಕಾಂಗ್ರೆಸ್ ನಡೆ ಜಾಗತಿಕ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನಿಸುತ್ತಿದೆ; ಇದು ಅಕ್ಷಮ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ಹಿನ್ನೆಲೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಶೆಟ್ಟರ್ ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande