
ಭಾಲ್ಕಿ, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬೀದರ ಜಿಲ್ಲೆಯ ಭಾಲ್ಕಿ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾವಿದ್ಯಾಲಯದಲ್ಲಿ ಕಿಸಾನ್ ಶಿಕ್ಷಣ ಪ್ರಸಾರಕ ಮಂಡಳ ಸಂಸ್ಥೆಯ ಸುವರ್ಣ ಮಹೋತ್ಸವ ಹಾಗೂ ಸಂಸ್ಥೆಯ ಸಂಸ್ಥಾಪಕರಾದ ಬಾಬುರಾವ ಪಾಟೀಲ ಶಿಂದೆ ಅವರ ಮೂರ್ತಿ ಅನಾವರಣ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಭಾಗವಹಿಸಿ ಮಾತನಾಡಿದರು.
ಕಳೆದ ಹಲವು ದಶಕಗಳಿಂದ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಕಿಸಾನ್ ಶಿಕ್ಷಣ ಪ್ರಸಾರಕ ಮಂಡಳ ಸಂಸ್ಥೆ ಸಮಾಜದ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಸಚಿವರು ಪ್ರಶಂಸಿಸಿದರು.
ಶಿಕ್ಷಣವೇ ಸಾಮಾಜಿಕ ಪರಿವರ್ತನೆಯ ಅತ್ಯಂತ ಶಕ್ತಿಯುತ ಸಾಧನವಾಗಿದ್ದು, ದಿ. ಬಾಬುರಾವ ಪಾಟೀಲ ಶಿಂದೆ ಅವರ ದೂರದೃಷ್ಟಿ ಹಾಗೂ ಶಿಕ್ಷಣದ ಮೇಲಿನ ನಿಷ್ಠೆ ಇಂದು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳಗಿಸಿದೆ ಎಂದು ಅವರು ಹೇಳಿದರು.
ಸಂಸ್ಥೆಯ ಸುವರ್ಣ ಮಹೋತ್ಸವವು ಅದರ ನಿರಂತರ ಶೈಕ್ಷಣಿಕ ಸೇವೆಯ ಯಶಸ್ಸಿನ ಪ್ರತೀಕವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಶಿಕ್ಷಣ ನೀಡುವ ಮೂಲಕ ಜವಾಬ್ದಾರಿಯುತ ಹಾಗೂ ಶಕ್ತಿಯುತ ನಾಗರಿಕರನ್ನು ರೂಪಿಸಲಿ ಎಂದು ಸಚಿವರು ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa