ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಅನುದಾನ : ಸಂಸದ ಕಾರಜೋಳ
ಚಿತ್ರದುರ್ಗ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ನೂತನ ಗಣಕೀಕೃತ ಕೊಠಡಿಯನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಶತಮಾನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನೂತನ ಜಿಲ್ಲಾ
Inauguration


ಚಿತ್ರದುರ್ಗ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘದ ನೂತನ ಗಣಕೀಕೃತ ಕೊಠಡಿಯನ್ನು ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಶತಮಾನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ನಿಮ್ಮ ಕಕ್ಷಿದಾರರೇ ನಮ್ಮ ಮತದಾರರು ಅವರ ಹಿತಕಾಯುವುದು ಸಂಸದರು ಮತ್ತು ವಕೀಲರ ಸಾಮೂಹಿಕ ಕರ್ತವ್ಯ ಎಂದು ಅವರು ಹೇಳಿದರು. ಬೇಸಿಗೆಯಲ್ಲಿ ಉಷ್ಣತೆ ಹೆಚ್ಚಿರುವುದರಿಂದ ವಕೀಲರ ಸುರಕ್ಷತೆಗಾಗಿ ಕೊಠಡಿಯಲ್ಲಿ ಸಮರ್ಪಕ ತಂಪು ವ್ಯವಸ್ಥೆ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ ಮಾತನಾಡಿ, ನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚುತ್ತಿರುವ ಹಿನ್ನೆಲೆ ನಿರೀಕ್ಷಣಾ ಜಾಮೀನು ಮತ್ತು ಬೇಲ್ ಅರ್ಜಿಗಳನ್ನು ಆನ್ಲೈನ್ ಮೂಲಕ ಸ್ವೀಕರಿಸುವ ವ್ಯವಸ್ಥೆ ಜಾರಿಯಾಗಲಿದ್ದು, ವಕೀಲರು ಕಂಪ್ಯೂಟರ್ ಕೊಠಡಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್. ಮಹೇಶ್ವರಪ್ಪ, 60 ವರ್ಷಗಳ ನಂತರ ವಕೀಲರಿಗೆ ಪಿಂಚಣಿ ಸೌಲಭ್ಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ನ್ಯಾಯಾಂಗದ ಹಿರಿಯ ಅಧಿಕಾರಿಗಳು, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande