ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಡಾ. ಜೈಶಂಕರ್
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ವಿದೇಶಾಂಗ ಸಚಿವ ಎಸ್.ಜೈಶಂಕರ ಅವರು ಭಾರತಕ್ಕೆ ಭೇಟಿ ನೀಡಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಹಾಗೂ ಬ್ರೆಜಿಲ್ ವಿದೇಶಾಂಗ ಸಚಿವ ಮೌರೊ ವಿಯೆರಾ ಅವರನ್ನು ಶನಿವಾರ ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು. ಭೇಟ
Meet


ನವದೆಹಲಿ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ವಿದೇಶಾಂಗ ಸಚಿವ ಎಸ್.ಜೈಶಂಕರ ಅವರು ಭಾರತಕ್ಕೆ ಭೇಟಿ ನೀಡಿರುವ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಹಾಗೂ ಬ್ರೆಜಿಲ್ ವಿದೇಶಾಂಗ ಸಚಿವ ಮೌರೊ ವಿಯೆರಾ ಅವರನ್ನು ಶನಿವಾರ ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು.

ಭೇಟಿ ಬಳಿಕ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಡಾ. ಜೈಶಂಕರ್, “ಭಾರತದೊಂದಿಗೆ ಇರುವ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಅಧ್ಯಕ್ಷ ಲೂಲಾ ಅವರು ಆತ್ಮೀಯತೆ ಹಾಗೂ ಮಾರ್ಗದರ್ಶನ ಹಂಚಿಕೊಂಡಿದ್ದಾರೆ. ಇದು ಶ್ಲಾಘನೀಯ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಲೂಲಾ ಅವರ ನಡುವೆ ಔಪಚಾರಿಕ ದ್ವಿಪಕ್ಷೀಯ ಸಭೆ ನಡೆಯಲಿದ್ದು, ಇದು ನಮ್ಮ ಸಂಬಂಧಗಳಿಗೆ ಹೊಸ ಶಕ್ತಿ ಮತ್ತು ಆವೇಗ ನೀಡಲಿದೆ,” ಎಂದು ತಿಳಿಸಿದ್ದಾರೆ.

ಭಾರತ–ಬ್ರೆಜಿಲ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಗೆ ಹೊಸ ದಿಕ್ಕು ನೀಡುವ ಉದ್ದೇಶದಿಂದ ಬ್ರೆಜಿಲ್ ಅಧ್ಯಕ್ಷರು ಭಾರತಕ್ಕೆ ಮಹತ್ವದ ರಾಜ್ಯ ಭೇಟಿ ನೀಡಿರುವುದು ವಿಶೇಷವಾಗಿದೆ. ವ್ಯಾಪಾರ, ಹೂಡಿಕೆ, ರಕ್ಷಣಾ ಸಹಕಾರ, ಇಂಧನ, ಹವಾಮಾನ ಬದಲಾವಣೆ ಹಾಗೂ ಜಾಗತಿಕ ವೇದಿಕೆಗಳಲ್ಲಿನ ಸಮನ್ವಯ ಸೇರಿದಂತೆ ಹಲವು ಪ್ರಮುಖ ವಿಷಯಗಳು ಚರ್ಚೆಯ ಕೇಂದ್ರಬಿಂದುವಾಗಿವೆ ಎಂದು ತಿಳಿದು ಬಂದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande