ಎಐಸಿಸಿ ಅಧ್ಯಕ್ಷರನ್ನು ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗ
ನವದೆಹಲಿ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ದೆಹಲಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗ ಭೇಟಿ ಮಾಡಿ, ರಾಜ್ಯದ ಪ್ರಚಲಿತ ರಾಜಕೀಯ ಹಾಗೂ ಆಡಳಿತಾತ್ಮಕ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಿ
Meet


ನವದೆಹಲಿ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ದೆಹಲಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗ ಭೇಟಿ ಮಾಡಿ, ರಾಜ್ಯದ ಪ್ರಚಲಿತ ರಾಜಕೀಯ ಹಾಗೂ ಆಡಳಿತಾತ್ಮಕ ವಿದ್ಯಮಾನಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.

ಸಭೆಯಲ್ಲಿ ರಾಜ್ಯದ ಇತ್ತೀಚಿನ ಬೆಳವಣಿಗೆಗಳು, ಸಂಘಟನಾ ಬಲವರ್ಧನೆ ಹಾಗೂ ಮುಂದಿನ ರಾಜಕೀಯ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ. ರಾಜ್ಯದಲ್ಲಿ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಖರ್ಗೆ ಅವರು ಸಲಹೆ-ಸೂಚನೆಗಳನ್ನು ನೀಡಿದರು ಎಂದು ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ, ಶಾಸಕರಾದ ಎನ್.ಎಚ್. ಕೋನರೆಡ್ಡಿ ಹಾಗೂ ಕೆ.ಎಸ್. ಬಸವಂತಪ್ಪ ಉಪಸ್ಥಿತರಿದ್ದು, ವಿವಿಧ ವಿಷಯಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande