ಮಾರ್ಚ್ 01 ರಂದು ರೇಣುಕಾಚಾರ್ಯ ಜಯಂತಿ
ಚಿತ್ರದುರ್ಗ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 01 ರಂದು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಸಂಬಂಧ ಅಗತ್ಯ ಪೂ
Meeting


ಚಿತ್ರದುರ್ಗ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 01 ರಂದು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಸಂಬಂಧ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.

ಜಿಲ್ಲಾ ಕೇಂದ್ರದಲ್ಲಿ ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಮಾರ್ಚ್ 01 ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಸಲಹೆ ನೀಡಿದರು.

ಇದಕ್ಕೆ ಸಮ್ಮತಿ ವ್ಯಕ್ತಪಡಿಸಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಸರ್ಕಾರದ ಶಿಷ್ಟಾಚಾರ ಪಾಲಿಸಿಕೊಂಡು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ವಿತರಣೆಗೆ ಕ್ರಮ ವಹಿಸಲಾಗುವುದು. ಶ್ರೀ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾಲಂಕಾರ ವ್ಯವಸ್ಥೆ ಕೈಗೊಂಡು ವಿಶೇಷವಾಗಿ ಆಚರಿಸಲಾಗುವುದು ಎಂದರು.

ಸಾಹಿತಿ ನಿರಂಜನ ದೇವರಮನೆ ಅವರಿಂದ ರೇಣುಕಾಚಾರ್ಯರ ಕುರಿತಾದ ವಿಶೇಷ ಉಪನ್ಯಾಸ ನೀಡಲು ಸಮಾಜದ ಮುಖಂಡರು ಒಪ್ಪಿಗೆ ಸೂಚಿಸಿದರು.

ಸಭೆಯಲ್ಲಿ ಅಖಿಲ ಭಾರತ ವೀರಶೈವ ಸಮಾಜ ಕಾರ್ಯದರ್ಶಿ ಎಂ.ಶಶಿಧರ್ ಬಾಬು, ಸಹ ಕಾರ್ಯದರ್ಶಿ ಜಿತೇಂದ್ರ ಎನ್.ಹುಲಿಕುಂಟೆ, ಪ್ರಧಾನ ಕಾರ್ಯದರ್ಶಿ (ಮಹಿಳಾ) ಉಮಾ ರಮೇಶ್, ಅಖಿಲ ಭಾರತ ವೀರಶೈವ ಮಹಾಸಭಾದ ನಿರ್ದೇಶಕರಾದ ರೀನಾ ವೀರಭದ್ರಪ್ಪ, ಜೆ.ಎಂ.ಶಿವಾನಂದ, ನಿರ್ಮಲ ಬಸವರಾಜ್, ಜಿಲ್ಲಾ ಜಂಗಮ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಷಡಾಕ್ಷರಯ್ಯ, ಮುಖಂಡರಾದ ಬಿ.ಎಂ.ಬಸವರಾಜಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಂ.ವಿ.ಚನ್ನಯ್ಯ ಸೇರಿದಂತೆ ಇಲಾಖೆ ಅಧಿಕಾರಿಗಳು ಇದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande