
ಕೊಪ್ಪಳ, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪ್ರವಾಸೋದ್ಯಮ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು 2025-26ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Entrepreneurship ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ.
ತರಬೇತಿ ಹಾಗೂ ಸಹಾಯಧನಕ್ಕಾಗಿ ಕೊಪ್ಪಳ ಜಿಲ್ಲೆಗೆ ಪರಿಶಿಷ್ಟ ಜಾತಿಗೆ ಸೇರಿದ 4 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 3 ಅಭ್ಯರ್ಥಿಗಳು ಸೇರಿದಂತೆ ಒಟ್ಟು 7 ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ.
ತರಬೇತಿಯನ್ನು ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು.
ಮೊಬೈಲ್ ಕ್ಯಾಂಟೀನ್ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 55 ವರ್ಷ ವಯೋಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 13 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಉಚಿತವಾಗಿ ಕಛೇರಿಯ ವೇಳೆಯಲ್ಲಿ ಪಡೆಯತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, 2ನೇ ಮಹಡಿ, ಜಿಲ್ಲಾಡಳಿತ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಕಛೇರಿ ಹಾಗೂ ದೂರವಾಣಿ ಸಂಖ್ಯೆ: 08539-225566 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್