
ವಿಜಯಪುರ, 21 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. 2 ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27), ರೇಖಾ ಭೋಕೆ ಮೃತ ದುರ್ದೈವಿಗಳು.
ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande