ಮಾರ್ಚ್ 03ರಂದು ಯೋಗಿನಾರೇಯಣ ಯತೀಂದ್ರ ಜಯಂತಿ
ಚಿತ್ರದುರ್ಗ, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಮಾರ್ಚ್ 03ರಂದು ಶ್ರೀ ಯೋಗಿನಾರೇಯಣ ಯತೀಂದ್ರರು (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವ
Meeting


ಚಿತ್ರದುರ್ಗ, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಮಾರ್ಚ್ 03ರಂದು ಶ್ರೀ ಯೋಗಿನಾರೇಯಣ ಯತೀಂದ್ರರು (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಗಳ ಕುರಿತು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಚರ್ಚಿಸಿದರು.

ಮಾರ್ಚ್ 03ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಸಮೀಪದ ಲಿಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು.

ಭಾವಚಿತ್ರ ಮೆರವಣಿಗೆ

ಜಯಂತಿ ಅಂಗವಾಗಿ ಕೈವಾರ ತಾತಯ್ಯ ಅವರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗುವುದು. ಅಂದು ಬೆಳಿಗ್ಗೆ 9.30ಕ್ಕೆ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ದೇಗುಲದಿಂದ ಮೆರವಣಿಗೆ ಪ್ರಾರಂಭವಾಗಿ, ಗಾಂಧಿ ವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಒನಕೆ ಓಬವ್ವ ವೃತ್ತ ಹಾಗೂ ಮದಕರಿ ವೃತ್ತದ ಮೂಲಕ ಲಿಡ್ಕರ್ ಭವನದವರೆಗೆ ಸಾಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ.ಎಂ. ಗುರುನಾಥ್ ಮಾತನಾಡಿ, ಕೈವಾರ ತಾತಯ್ಯ ಅವರ ಕುರಿತಾಗಿ ಸುಗಮ ಸಂಗೀತ ಕಾರ್ಯಕ್ರಮ ಹಾಗೂ ಸಾಹಿತಿ ಹುರಳಿ ಬಸವರಾಜ್ ಅವರಿಂದ ವಿಶೇಷ ಉಪನ್ಯಾಸವನ್ನು ಏರ್ಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande