ವಿದ್ಯುತ್ ದರ ಏರಿಕೆಗೆ ಸಿದ್ದತೆ : ಅಶೋಕ್ ಆಕ್ರೋಶ
ಬೆಂಗಳೂರು, 21 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ. ಪ್ರತಿಪಕ್ಷ ನಾಯಕ ಆರ್ ಅಶೋಕ ಸರಕಾದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ ಅವರು, “ಬೆಲೆ ಏರಿಕೆಯ ಬಾದ್‌ಷಾ ಮುಖ
Ashok


ಬೆಂಗಳೂರು, 21 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ. ಪ್ರತಿಪಕ್ಷ ನಾಯಕ ಆರ್ ಅಶೋಕ ಸರಕಾದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ ಅವರು, “ಬೆಲೆ ಏರಿಕೆಯ ಬಾದ್‌ಷಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಲು ‘ಸಿದ್ಧ’ತೆ ನಡೆಸಿದ್ದಾರೆ. ಈ ಏಪ್ರಿಲ್‌ನಿಂದ ಮತ್ತೊಮ್ಮೆ ವಿದ್ಯುತ್ ದರ ಏರಿಸಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಅವರು, “ಕನ್ನಡಿಗರ ಜೇಬಿಗೆ ನಿರಂತರವಾಗಿ ಕನ್ನ ಹಾಕುವುದೇ ಕಾಂಗ್ರೆಸ್ ಸರ್ಕಾರದ ‘ಒನ್ ಪಾಯಿಂಟ್’ ಅಜೆಂಡಾ ಆಗಿರುವುದು ನಿಜಕ್ಕೂ ದುರಂತ” ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande