
ಬಾಗಲಕೋಟೆ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ನಗರದಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ಸಂಭವಿಸಿದ ಕಲ್ಲುತೂರಾಟ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತರಾದ ಪ್ರಕಾಶ ಮತ್ತು ಅಶೋಕ ಬಾರಕೇರ ಅವರನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಭೇಟಿ ಮಾಡಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿದ್ಯಾಧರ ಸವದಿ ಅವರ ನೇತೃತ್ವದಲ್ಲಿ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಲಾಯಿತು. ಘಟನೆ ಕುರಿತು ಮಾಹಿತಿ ಪಡೆದು, ಶೀಘ್ರ ಚೇತರಿಕೆಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಗಾಯಾಳುಗಳ ಕುಟುಂಬಸ್ಥರಿಗೆ ಸಹಕಾರ ನೀಡುವ ಭರವಸೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa