
ಕಾರವಾರ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅiವರು, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಮತ್ತು ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ 93 ರಲ್ಲಿನ ಸೇತುವೆ ನಿರ್ಮಾಣ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡದ ನಿರ್ಮಾಣ ಹಾಗೂ ಮುಂಡಗೋಡ ತಾಲ್ಲೂಕಿನ ಹೊಸ ಪ್ರವಾಸಿ ಮಂದಿರ ನಿರ್ಮಾಣ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಶಾಸಕರುಗಳಾದ ಶಿವರಾಂ ಹೆಬ್ಬಾರ್, ಸತೀಶ್ ಸೈಲ್, ಭೀಮಣ್ಣ ನಾಯ್ಕ, ಮಾಜಿ ಸಚಿವರೂ ಶಾಸಕರಾದ ಆರ್.ವಿ.ದೇಶಪಾಂಡೆ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa