ಪದ್ಮನಾಭನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ಬೆಂಗಳೂರು, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಪದ್ಮನಾಭನಗರ ವಾರ್ಡ್ನ ಬಿ.ಎಚ್.ಸಿ.ಎಸ್. ಲೇಔಟ್ ನಿವಾಸಿಗಳ ದೀರ್ಘಕಾಲದ ಶುದ್ಧ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನ
Inauguration


ಬೆಂಗಳೂರು, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಪದ್ಮನಾಭನಗರ ವಾರ್ಡ್ನ ಬಿ.ಎಚ್.ಸಿ.ಎಸ್. ಲೇಔಟ್ ನಿವಾಸಿಗಳ ದೀರ್ಘಕಾಲದ ಶುದ್ಧ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಲ್ಲಿ ವೇಗವಾಗಿ ವಿಸ್ತರಿಸುತ್ತಿರುವ ವಸತಿ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಆದ್ಯತೆಯಾಗಿದೆ ಎಂದು ಹೇಳಿದರು. ಸ್ಥಳೀಯರ ಬೇಡಿಕೆಯನ್ನು ಗಮನಿಸಿ ಈ ಘಟಕವನ್ನು ನಿರ್ಮಿಸಲಾಗಿದ್ದು, ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ನಿರಂತರವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಘಟಕದಿಂದ ಬಿ.ಎಚ್.ಸಿ.ಎಸ್. ಲೇಔಟ್ ಹಾಗೂ ಸುತ್ತಮುತ್ತಲಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿದ್ದು, ಆರೋಗ್ಯದ ದೃಷ್ಟಿಯಿಂದಲೂ ಇದು ಉಪಯುಕ್ತವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಅಂಜನಪ್ಪ, ಸ್ಥಳೀಯ ಪ್ರಮುಖರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande