
ಧಾರವಾಡ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡುಲಾಗುತ್ತಿರುವ ಶುಲ್ಕ ಮರುಪಾವತಿ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ 05, 2026 ರವರೆಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ ವಿಸ್ತರಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಮಾರ್ಚ 05, 2026 ರೊಳಗಾಗಿ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa