
ಧಾರವಾಡ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 25ರ ಭೂತ್ ನಂ. 201ರಲ್ಲಿರುವ ವಡ್ಡಿನ ಕಲ್ಯಾಣ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮದ 131ನೇ ಸಂಚಿಕೆಯನ್ನು ವೀಕ್ಷಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭಾಗವಹಿಸಿ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಪ್ರಧಾನಿ ಮೋದಿ ಅವರು ತಮ್ಮ ಮಾತುಕತೆಯಲ್ಲಿ ದೇಶದ ಅಭಿವೃದ್ಧಿ, ಜನಸಾಮಾನ್ಯರ ಭಾಗವಹಣೆ ಹಾಗೂ ಸಾಮಾಜಿಕ ವಿಷಯಗಳ ಕುರಿತು ಪ್ರಸ್ತಾಪಿಸಿದ ಅಂಶಗಳನ್ನು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಮುರುಗೇಶ ನಿರಾಣಿ, ಶಾಸಕ ಅರವಿಂದ ಬೆಲ್ಲದ, ಮಹಾಪೌರ ಶ್ರೀಮತಿ ಜೋತಿ ಪಾಟೀಲ, ಮಂಡಲ ಅಧ್ಯಕ್ಷ ಮಂಜುನಾಥ ಮಲ್ಲಿಗವಾಡ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಗರಗ, ವಾರ್ಡ್ ಪ್ರಮುಖ ಪರಶುರಾಮ ಸಾಖರೆ, ಪಾಲಿಕೆಯ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa