
ಹುಬ್ಬಳ್ಳಿ, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಧಾರವಾಡ ಲೋಕ ಸಭಾ ಕ್ಷೇತ್ರದ 'ಸಂಸದ ಕ್ರೀಡಾ ಮಹೋತ್ಸವ 2025-26' ಅಂಗವಾಗಿ ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಲೋಕಸಭಾ ಮಟ್ಟದ ಫೈನಲ್ ಕುಸ್ತಿ ಪಂದ್ಯಾವಳಿಗಳನ್ನು ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಸದೃಢ ಭಾರತದ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರಗಳಲ್ಲಿ 'ಸಂಸದ್ ಖೇಲ್ ಮಹೋತ್ಸವ'ನ್ನು ಆಯೋಜಿಸುತ್ತಿದ್ದು, ಹಾಗೇಯೇ ನಮ್ಮ ಧಾರವಾಡ ಲೋಕ ಸಭಾ ಕ್ಷೇತ್ರದ ಪ್ರತಿಭಾನ್ವಿತ ಕುಸ್ತಿಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ 'ಸಂಸದ ಕ್ರೀಡಾ ಮಹೋತ್ಸವ' ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa