ಬಿಜೆಪಿ ವಿರುದ್ಧ ಸಚಿವ ಎಚ್.ಸಿ. ಮಹಾದೇವಪ್ಪ ವಾಗ್ದಾಳಿ
ಬೆಂಗಳೂರು, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ದಿನವೂ ಹತಾಶೆ ಮತ್ತು ಅಸೂಯೆಯಿಂದ ಹೇಳಿಕೆಗಳನ್ನು ನೀಡುತ್ತಿರುವ ಕರ್ನಾಟಕ ಬಿಜೆಪಿ ನಾಯಕರು ಹಾಗೂ ಪ್ರತಿಪಕ್ಷ ನಾಯಕರಾದ ಆರ್.ಅಶೋಕ ಅವರು ತಮ್ಮದೇ ಪಕ್ಷದ ಶಾಸಕ ಡಾ. ಚಂದ್ರು ಲಮಾಣಿ ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಏನು ಹೇಳುತ್
ಬಿಜೆಪಿ ವಿರುದ್ಧ ಸಚಿವ ಎಚ್.ಸಿ. ಮಹಾದೇವಪ್ಪ ವಾಗ್ದಾಳಿ


ಬೆಂಗಳೂರು, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ದಿನವೂ ಹತಾಶೆ ಮತ್ತು ಅಸೂಯೆಯಿಂದ ಹೇಳಿಕೆಗಳನ್ನು ನೀಡುತ್ತಿರುವ ಕರ್ನಾಟಕ ಬಿಜೆಪಿ ನಾಯಕರು ಹಾಗೂ ಪ್ರತಿಪಕ್ಷ ನಾಯಕರಾದ ಆರ್.ಅಶೋಕ ಅವರು ತಮ್ಮದೇ ಪಕ್ಷದ ಶಾಸಕ ಡಾ. ಚಂದ್ರು ಲಮಾಣಿ ಅವರ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಏನು ಹೇಳುತ್ತಾರೆ ಎಂಬ ಕುತೂಹಲ ನನ್ನದು ಎಂದು ಸಚಿವ ಎಚ್.ಸಿ.ಮಹಾದೇವಪ್ಪ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿದ್ದಾರೆ.

“ಇತರರ ಮೇಲೆ ಆರೋಪ ಮಾಡುವ ಮೊದಲು ತಮ್ಮ ಮನೆಯೊಳಗಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡಬೇಕು,” ಎಂದು ಮಹಾದೇವಪ್ಪ ತೀಕ್ಷ್ಣವಾಗಿ ಹೇಳಿದರು.

ಬಿಜೆಪಿಗರು ತಾವು ಆರ್ಎಸ್ಎಸ್ ನಿಂದ ಸಂಸ್ಕಾರ ಮತ್ತು ಸಂಸ್ಕೃತಿ ಪಾಠ ಕಲಿತು ಬಂದಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡೆನುಡಿಗಳನ್ನು ಗಮನಿಸಿದರೆ, ಆರ್ಎಸ್ಎಸ್ನ ಸಂಸ್ಕೃತಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವಂತಿದೆಯೇ ಎಂಬ ಅನುಮಾನ ಮೂಡುತ್ತದೆ ಎಂದು ಅವರು ಕಟುವಾಗಿ ಟೀಕಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande