ನೆಲಮಂಗಲದ ಮಾಕಳಿ ಬಳಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ
ಉಂಟಾಗಿದೆ
Fire


ಬೆಂಗಳೂರು, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ಹೊರವಲಯದ ಮಾಕಳಿ ಸಮೀಪದ ಗೋದಾಮು ಒಂದರಲ್ಲಿ ಭಾನುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಸಂಪೂರ್ಣವಾಗಿ ಧಗಧಗ ಹೊತ್ತಿ ಉರಿಯುತ್ತಿದೆ. ಬೆಂಕಿಯ ಜ್ವಾಲೆಗಳು ಮುಗಿಲೆತ್ತರಕ್ಕೆ ಎದ್ದಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿದೆ.

ನೆಲಮಂಗಲ ರಸ್ತೆಯ ಮಾಕಳಿ ಬಳಿ ಇರುವ ಈ ಗೋದಾಮಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಗ್ನಿ ಭೀಕರ ರೂಪ ಪಡೆದಿದೆ. ಘಟನಾ ಸ್ಥಳದಿಂದ ಭಯಾನಕ ಶಬ್ದಗಳು ಕೇಳಿಬರುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಗೋದಾಮಿನ ಒಳಭಾಗದಲ್ಲಿ ದಹನಶೀಲ ವಸ್ತುಗಳು ಸಂಗ್ರಹವಾಗಿದ್ದ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸಪಡುತ್ತಿವೆ. ಬೆಂಕಿಯ ತೀವ್ರತೆಯಿಂದ ಕಾರ್ಯಾಚರಣೆ ಸವಾಲಿನದ್ದಾಗಿದೆ. ಸುತ್ತಮುತ್ತಲಿನ ಕಟ್ಟಡಗಳಿಗೆ ಬೆಂಕಿ ತಗುಲದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಆದರೆ ಆಸ್ತಿಪಾಸ್ತಿಗೆ ಭಾರೀ ಹಾನಿ ಸಂಭವಿಸಿರುವ ಶಂಕೆಯಿದೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande