ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆ ಅರ್ಜಿ ಆಹ್ವಾನ
ಶಿವಮೊಗ್ಗ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜನವರಿ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 02-01-2014 ರಿಂದ 01-07-2015 ರೊಳಗೆ ಜನಿಸಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿ
ಮಿಲಿಟರಿ ಕಾಲೇಜ್ ಪ್ರವೇಶ ಪರೀಕ್ಷೆ ಅರ್ಜಿ ಆಹ್ವಾನ


ಶಿವಮೊಗ್ಗ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜನವರಿ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 02-01-2014 ರಿಂದ 01-07-2015 ರೊಳಗೆ ಜನಿಸಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯು ದಿನಾಂಕ: 07-06-2026 ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು – 560025 ಇವರಿಗೆ ಏ. 05 ರೊಳಗಾಗಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ www.rimc.gov.in ವನ್ನು ಸಂಪರ್ಕಿಸಬಹುದಾಗಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande