
ಚಿಕ್ಕಮಗಳೂರು, 22 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಮದವೇರಿದ್ದ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ದುರ್ಘಟನೆ ನಡೆದಿದೆ.
ಮೃತ ಮಹಿಳೆಯನ್ನು ಹಾವೇರಿ ಜಿಲ್ಲೆಯ ಹಾನಗಲ್ ಮೂಲದ ಬೋರಮ್ಮ (33) ಎಂದು ಗುರುತಿಸಲಾಗಿದೆ. ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾಡಾನೆಗೆ ಮದವೇರಿರುವುದರಿಂದ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೇ ಸಮಯದಲ್ಲಿ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಮೇಲಿಂದ ಮೇಲೆ ಸಾವುಗಳು ಸಂಭವಿಸುತ್ತಿದ್ದರೂ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಗ್ರಾಮಸ್ಥರ ಪ್ರಕಾರ, ಕಾಡಾನೆ ದಾಳಿಗೆ ಇದುವರೆಗೆ ಒಂಬತ್ತು ಜನರು ಬಲಿಯಾಗಿದ್ದಾರೆ. “ಸಾವಿನ ನಂತರ ನೀಡುವ ಪರಿಹಾರ ಶಾಶ್ವತ ಪರಿಹಾರವಲ್ಲ; ಸಮಸ್ಯೆಗೆ ಸಮಗ್ರ ಮತ್ತು ಶಾಶ್ವತ ಕ್ರಮ ಅಗತ್ಯ” ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa