ನಾನಾ ಕೋರ್ಸ್ಗಳ ಪ್ರವೇಶಾತಿ ಅರ್ಜಿ ಆಹ್ವಾನ
ನಾನಾ
ನಾನಾ ಕೋರ್ಸ್ಗಳ ಪ್ರವೇಶಾತಿ ಅರ್ಜಿ ಆಹ್ವಾನ


ಶಿವಮೊಗ್ಗ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06, ರ ವತಿಯಿಂದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ ಸಾಲಿನ ಶ್ಯೆಕ್ಷಣಿಕ ವರ್ಷದ ಜನವರಿ ಆವೃತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಲ್.ಐ.ಸಿ,ಬಿ.ಎಸ್.ಡಬ್ಲ್ಯೂ., ಎಂ.ಎ,/ಎಂ.ಕಾಂ,, ಎಂ.ಎಸ್.ಡಬ್ಲ್ಯೂ, ಎಂ.ಸಿಎ, ಎಂ.ಎಸ್ಸಿ, ಎಂ.ಬಿ.ಎ., ಎಂ.ಎಲ್.ಐ.ಎಸ್ಸಿ., ಪಿ.ಜಿ., ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶಾತಿಗಾಗಿ ಮಾ.31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಪ್ರಾದೇಶಿಕ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಲ್ಲಿ ಶೇ 10%, ಡಿಫೆನ್ಸ್ ಹಾಗೂ ಎಕ್ಸ್ ಸರ್ವೀಸ್ಮೆನ್ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ 10%, ಬ್ಯಾಡ್ಜ್ ಹೊಂದಿರುವ ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ಶೇ 10% ರಿಯಾಯಿತಿ ನೀಡಲಾಗುತ್ತದೆ ಹಾಗೂ ತೃತೀಯಾ ಲಿಂಗದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾತಿಯನ್ನು ನೀಡಲಾಗುತ್ತಿದೆ. ಐ.ಟಿ.ಐ. ಹಾಗೂ ಡಿಪ್ಲೋಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಥಮಬಿ.ಎ/ಬಿ.ಕಾಂ ಪ್ರವೇಶಾತಿಗೆ ಅವಕಾಶವಿರುತ್ತದೆ. ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಸಂಬಂಧ ಪಟ್ಟ ದಾಖಲಾತಿಗಳನ್ನು ನೀಡಿದಲ್ಲಿ ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ಪಡೆಯಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸ್ವಾಮಿ ಬಿ.ಎಮ್ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಆಲ್ಕೋಳ, ಸರ್ಕಲ್, ಎಲ್.ಐ.ಸಿ. ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ, ದೂ.ಸಂ.: 9900667916/ 9739803295/ 9480765905 ಗಳನ್ನು ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande